Horoscope Today – ದಿನ ಭವಿಷ್ಯ; ಕನ್ಯಾ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ

ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಗುರುವಾರ, ಏಪ್ರಿಲ್ 29, 2021 ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಕನ್ಯಾ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ
ದಿನ ಭವಿಷ್ಯ
Edited By: ಆಯೇಷಾ ಬಾನು

Updated on: Apr 29, 2021 | 6:29 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಗುರುವಾರ, ಏಪ್ರಿಲ್ 29, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1: 48ರಿಂದ ಇಂದು ಮಧ್ಯಾಹ್ನ 3:23 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.51. ಸೂರ್ಯಾಸ್ತ: ಸಂಜೆ 6.35.

ತಾ.29-04-2021 ಗುರುವಾರದ ರಾಶಿಭವಿಷ್ಯ

ಮೇಷ: ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಉನ್ನತ ಶಿಕ್ಷಣದ ಕನಸು ಈಡೇರುವದು. ಶುಭ ಸಂಖ್ಯೆ: 2

ವೃಷಭ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ಕರ್ಕ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 7

ಸಿಂಹ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವದು ಯೋಗ ಇರುವದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 3

ಕನ್ಯಾ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: ಶುಭ ಸಂಖ್ಯೆ:  6

ತುಲಾ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 8

ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 5

ಧನು: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 1

ಮಕರ: ಹಳೆಯ ಸಾಲ ಮರುಪಾವತಿಯಾಗುವದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 4

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 9

ಮೀನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 3

 

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us