AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ, ಆ ಬಗ್ಗೆ ಇರಲಿ ಎಚ್ಚರ

Nitya Bhavishya: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ನವಮಿ ತಿಥಿ, ಸೋಮವಾರ, ಏಪ್ರಿಲ್ 05, 2021. ಉತ್ತರಾಷಾಢ ನಕ್ಷತ್ರ,ದ ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ, ಆ ಬಗ್ಗೆ ಇರಲಿ ಎಚ್ಚರ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Apr 05, 2021 | 9:21 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ನವಮಿ ತಿಥಿ, ಸೋಮವಾರ, ಏಪ್ರಿಲ್ 05, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 7:39 ರಿಂದ ಇಂದು ಬೆಳಿಗ್ಗೆ 9 :11ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.07. ಸೂರ್ಯಾಸ್ತ: ಸಂಜೆ 6.29.

ತಾ.05-04-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ವೃಷಭ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 1

ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 6

ಕರ್ಕ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 3

ಸಿಂಹ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣ ಬಲ ಕೂಡಿಬರುವುದು. ಶುಭ ಸಂಖ್ಯೆ: 8

ಕನ್ಯಾ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 5

ತುಲಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಿಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 4

ವೃಶ್ಚಿಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 7

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 2

ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 3

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 4

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 7:01 am, Mon, 5 April 21

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ