Horoscope Today – ದಿನ ಭವಿಷ್ಯ: ವೃಷಭ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಳಂಬ ಉಂಟಾಗುವ ಸಾಧ್ಯತೆ

06-04-2021 ರ ಮಂಗಳವಾರದ ರಾಶಿಭವಿಷ್ಯ: ಮಕರ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ.

  • TV9 Web Team
  • Published On - 6:51 AM, 6 Apr 2021
Horoscope Today - ದಿನ ಭವಿಷ್ಯ: ವೃಷಭ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಳಂಬ ಉಂಟಾಗುವ ಸಾಧ್ಯತೆ
ರಾಶಿ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದಶಮಿ ತಿಥಿ, ಮಂಗಳವಾರ, ಏಪ್ರಿಲ್ 06, 2021. ಶ್ರವಣ ನಕ್ಷತ್ರ, ರಾಹುಕಾಲ :ಇಂದು ಸಂಜೆ 3 :24 ರಿಂದ ಇಂದು ಸಂಜೆ 4:56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.07. ಸೂರ್ಯಾಸ್ತ: ಸಂಜೆ 6.29.

ತಾ.06-04-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 8

ಮಿಥುನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1

ಕರ್ಕ: ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಸಿಂಹ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 1

ಕನ್ಯಾ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 7

ತುಲಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 3

ವೃಶ್ಚಿಕ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಧನು: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 6

ಮಕರ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 5

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 3

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 7

 


ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937