AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಕಟಕ ರಾಶಿಯವರಿಗೆ ಆತುರದ ನಿರ್ಣಯಗಳು ಅಪಾಯ ತರಬಹುದು

07-04-2021 ರ ಬುಧವಾರದ ರಾಶಿಭವಿಷ್ಯ: ಸಿಂಹ ರಾಶಿಯವರ ಕೆಲಸಗಳು ನಿಧಾನಗತಿಯಲ್ಲಿ ಸಾಗುವುವು ಸೂಕ್ಷ್ಮತೆಯಿಂದ ವ್ಯವಹರಿಸಿರಿ.

Horoscope Today - ದಿನ ಭವಿಷ್ಯ: ಕಟಕ ರಾಶಿಯವರಿಗೆ ಆತುರದ ನಿರ್ಣಯಗಳು ಅಪಾಯ ತರಬಹುದು
ರಾಶಿ ಭವಿಷ್ಯ
TV9 Web
| Edited By: |

Updated on:Apr 05, 2022 | 12:45 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಬುಧವಾರ, ಏಪ್ರಿಲ್ 07, 2021. ಧನಿಷ್ಠ ನಕ್ಷತ್ರ, ರಾಹುಕಾಲ: ಇಂದು ಬೆಳಗ್ಗೆ 12:18 ರಿಂದ ಇಂದು ಮಧ್ಯಾಹ್ನ 1:51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.30.

ತಾ.07-04-2021 ರ ಬುಧವಾರದ ರಾಶಿಭವಿಷ್ಯ

ಮೇಷ: ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭಸಂಖ್ಯೆ: 6

ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭಸಂಖ್ಯೆ: 2

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭಸಂಖ್ಯೆ: 8

ಕಟಕ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭಸಂಖ್ಯೆ: 1

ಸಿಂಹ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು. ಶುಭಸಂಖ್ಯೆ: 7

ಕನ್ಯಾ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭಸಂಖ್ಯೆ: 4

ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭಸಂಖ್ಯೆ: 5

ವೃಶ್ಚಿಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭಸಂಖ್ಯೆ: 5

ಧನು: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭಸಂಖ್ಯೆ: 3

ಮಕರ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭಸಂಖ್ಯೆ: 9

ಕುಂಭ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭಸಂಖ್ಯೆ: 8

ಮೀನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:50 am, Wed, 7 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ