AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಬಾಳ ಸಂಗಾತಿ ಜತೆಗಿನ ಚಿಕ್ಕ-ಪುಟ್ಟ ಚರ್ಚೆಗಳೇ ವಿರಸಕ್ಕೆ ದಾರಿಯಾದೀತು

08-04-2021 ರ ಗುರುವಾರದ ರಾಶಿಭವಿಷ್ಯ: ಕರ್ಕ ರಾಶಿಯವರಿಗೆ ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು.

Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಬಾಳ ಸಂಗಾತಿ ಜತೆಗಿನ ಚಿಕ್ಕ-ಪುಟ್ಟ ಚರ್ಚೆಗಳೇ ವಿರಸಕ್ಕೆ ದಾರಿಯಾದೀತು
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು|

Updated on: Apr 08, 2021 | 6:16 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಗುರುವಾರ, ಏಪ್ರಿಲ್ 07, 2021. ಶತಭಿಷೆ ನಕ್ಷತ್ರ, ರಾಹುಕಾಲ : ರಾಹುಕಾಲ : ಇಂದು ಮಧ್ಯಾಹ್ನ 1:50 ರಿಂದ ಇಂದು ಸಂಜೆ 3:23 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.30.

ತಾ.08-04-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 5

ವೃಷಭ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:  3

ಮಿಥುನ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು. ಶುಭ ಸಂಖ್ಯೆ:  9

ಕರ್ಕ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ:  4

ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ:  6

ಕನ್ಯಾ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ:  8

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ:  1

ವೃಶ್ಚಿಕ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು. ಶುಭ ಸಂಖ್ಯೆ:  3

ಧನು: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ:  6

ಮಕರ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ:  8

ಕುಂಭ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 7

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್