AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಯಾರಿಗೆ ಶುಭ, ಯಾರಿಗೆ ಅಶುಭ? ಇಲ್ಲಿದೆ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ.

Horoscope Today - ದಿನ ಭವಿಷ್ಯ: ಯಾರಿಗೆ ಶುಭ, ಯಾರಿಗೆ ಅಶುಭ? ಇಲ್ಲಿದೆ ಇಂದಿನ ಭವಿಷ್ಯ
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on:Apr 09, 2021 | 7:55 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಶುಕ್ರವಾರ, ಏಪ್ರಿಲ್ 09, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 10 :43 ರಿಂದ ಇಂದು ಮಧ್ಯಾಹ್ನ 12:16 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.30.

ತಾ.09-04-2021 ರ ಶುಕ್ರವಾರದ ರಾಶಿಭವಿಷ್ಯ ಮೇಷ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 6

ಕಟಕ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಸಿಂಹ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 7

ಕನ್ಯಾ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 1

ತುಲಾ: ಧನಮದಕ್ಕಿಂತ ವಿದ್ಯಮಾನ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 6

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8

ಧನು: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 2

ಮಕರ:ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 6

ಕುಂಭ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 8

ಮೀನ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:26 am, Fri, 9 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ