ದಿನ ಭವಿಷ್ಯ
ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಶುಕ್ರವಾರ, ಏಪ್ರಿಲ್ 09, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 10 :43 ರಿಂದ ಇಂದು ಮಧ್ಯಾಹ್ನ 12:16 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.30.
ತಾ.09-04-2021 ರ ಶುಕ್ರವಾರದ ರಾಶಿಭವಿಷ್ಯ
ಮೇಷ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3
ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9
ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 6
ಕಟಕ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಸಿಂಹ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 7
ಕನ್ಯಾ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 1
ತುಲಾ: ಧನಮದಕ್ಕಿಂತ ವಿದ್ಯಮಾನ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 6
ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8
ಧನು: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 2
ಮಕರ:ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 6
ಕುಂಭ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 8
ಮೀನ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು. ಶುಭ ಸಂಖ್ಯೆ: 3
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937
ಕೊವಿಡ್ ವಿರುದ್ಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಫುಟ್ನಿಕ್ ಲಸಿಕೆಯನ್ನು ಉತ್ಪಾದಿಸಲು ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಶೀಘ್ರಗತಿಯಲ್ಲಿ ಹೆಚ್ಚಿನ ಸಂಖ್ಯೆಯ ಲಸಿಕೆ ಅಭಿವೃದ್ಧಿಪಡಿಸುವ ಗುರಿಯನ್ನು ತಲುಪುವಲ್ಲಿ ಇದು ಮಹತ್ವದ ಬೆಳವಣಿಗೆ ಎನಿಸಿದೆ.