Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗದ ಅವಕಾಶಗಳು ಕೂಡಿ ಬರುವವು

| Updated By: Vinay Bhat

Updated on: Aug 10, 2021 | 6:48 AM

Horoscope ಆಗಸ್ಟ್ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗದ ಅವಕಾಶಗಳು ಕೂಡಿ ಬರುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಮಂಗಳವಾರ, ಆಗಸ್ಟ್ 10, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.33 ರಿಂದ ಇಂದು ಸಂಜೆ 5.09 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.45

ತಾ.10-08-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 1

ವೃಷಭ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವುದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು. ಶುಭ ಸಂಖ್ಯೆ: 9

ಮಿಥುನ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 2

ಕಟಕ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 8

ಸಿಂಹ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 3

ಕನ್ಯಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7

ತುಲಾ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 4

ವೃಶ್ಚಿಕ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 6

ಧನು: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 9

ಕುಂಭ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 5

ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937