Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗುತ್ತೆ

Horoscope ಆಗಸ್ಟ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗುತ್ತೆ
ದಿನ ಭವಿಷ್ಯ
Edited By:

Updated on: Aug 11, 2021 | 6:38 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ತದಿಗೆ ತಿಥಿ, ಬುಧವಾರ, ಆಗಸ್ಟ್ 11, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.21 ರಿಂದ ಇಂದು ಮಧ್ಯಾಹ್ನ 1.56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.44

ತಾ.11-08-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕಟಕ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು ಶುಭ ಸಂಖ್ಯೆ: 3

ವೃಶ್ಚಿಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 4

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 9

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 2

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us