Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ.

Horoscope ಆಗಸ್ಟ್ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ.
ದಿನ ಭವಿಷ್ಯ
Follow us
TV9 Web
| Updated By: Skanda

Updated on:Aug 12, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಚೌತಿ ತಿಥಿ, ಗುರುವಾರ, ಆಗಸ್ಟ್ 12, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.56 ರಿಂದ ಇಂದು ಸಂಜೆ 3.31 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.44

ತಾ.12-08-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಯಾವುದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 9

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 2

ಸಿಂಹ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 9

ವೃಶ್ಚಿಕ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 6

ಧನು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 3

ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 8

ಕುಂಭ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 2

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:30 am, Thu, 12 August 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ