Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ ಉಂಟಾಗಲಿದೆ
Horoscope ಆಗಸ್ಟ್ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಶುಕ್ರವಾರ, ಆಗಸ್ಟ್ 13, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.44 ರಿಂದ ಇಂದು ಬೆಳಿಗ್ಗೆ 12.19 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.43
ತಾ.13-08-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥಕವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5
ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9
ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 4
ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8
ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3
ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 7
ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 2
ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 6
ಧನು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1
ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9
ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7
ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ಶುಭ ಸಂಖ್ಯೆ: 3
Published On - 6:29 am, Fri, 13 August 21