Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು
Horoscope ಆಗಸ್ಟ್ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಶನಿವಾರ, ಆಗಸ್ಟ್ 14, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.08 ರಿಂದ ಇಂದು ಬೆಳಿಗ್ಗೆ 10.43 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.42
ತಾ.14-08-2021 ರ ಶನಿವಾರದ ರಾಶಿಭವಿಷ್ಯ.
ಮೇಷ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 8
ವೃಷಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1
ಮಿಥುನ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 9
ಕಟಕ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 2
ಸಿಂಹ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 6
ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
ತುಲಾ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 5
ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವುದು. ಶುಭ ಸಂಖ್ಯೆ: 7
ಧನು: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 4
ಮಕರ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 9
ಕುಂಭ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 3
ಮೀನ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 2