Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

| Updated By: Skanda

Updated on: Aug 15, 2021 | 6:32 AM

ವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು,ಸಪ್ತಮಿಪಕ್ಷ, ಷಷ್ಠಿ ತಿಥಿ, ಭಾನುವಾರ, ಆಗಸ್ಟ್ 15, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು,ಸಪ್ತಮಿಪಕ್ಷ, ಷಷ್ಠಿ ತಿಥಿ, ಭಾನುವಾರ, ಆಗಸ್ಟ್ 15, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5: 06ರಿಂದ ಇಂದು ಸಂಜೆ 6:41  ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.58. ಸೂರ್ಯಾಸ್ತ: ಸಂಜೆ 6.42

ತಾ.15-08-2021 ರ ಭಾನುವಾರದ, ರಾಶಿಭವಿಷ್ಯ,
**
ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 9

ಮಿಥುನ: ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 5

ಕರ್ಕ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 8

ಸಿಂಹ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಶುಭ ಸಂಖ್ಯೆ: 3

ಕನ್ಯಾ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು.ಶುಭ ಸಂಖ್ಯೆ: 7

ತುಲಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 3

ವೃಶ್ಚಿಕ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ: 6

ಧನು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 2

ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ:  1

ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 8

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937