Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು

| Updated By: ಆಯೇಷಾ ಬಾನು

Updated on: Aug 16, 2021 | 6:24 AM

Horoscope ಆಗಸ್ಟ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಸೋಮವಾರ, ಆಗಸ್ಟ್ 16, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.34 ರಿಂದ ಇಂದು ಬೆಳಿಗ್ಗೆ 9.09 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.41

ತಾ.16-08-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 2

ವೃಷಭ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು. ಶುಭ ಸಂಖ್ಯೆ: 9

ಮಿಥುನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 1

ಕಟಕ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 4

ಸಿಂಹ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 8

ಕನ್ಯಾ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 3

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 6

ವೃಶ್ಚಿಕ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 4

ಧನು: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7

ಮಕರ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಕುಂಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ಮೀನ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937