Horoscope Today- ದಿನ ಭವಿಷ್ಯ; ಮಿಥುನ ರಾಶಿಯವರಿಗೆ ವ್ಯಾಪಾರದಲ್ಲಿ ಅಭಿವೃದ್ಧಿಯಾಗುವ ಸಾಧ್ಯತೆ ಇದೆ

Horoscope ಆಗಸ್ಟ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮಿಥುನ ರಾಶಿಯವರಿಗೆ ವ್ಯಾಪಾರದಲ್ಲಿ ಅಭಿವೃದ್ಧಿಯಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Aug 17, 2021 | 6:38 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ನವಮಿ ತಿಥಿ, ಮಂಗಳವಾರ, ಆಗಸ್ಟ್ 17, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.30 ರಿಂದ ಇಂದು ಸಂಜೆ 5.05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.41

ತಾ.17-08-2021 ರ ಮಂಗಳವಾರದ ರಾಶಿಭವಿಷ್ಯ ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವಉದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8

ಮಕರ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3

ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ:1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!