Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು

| Updated By: ಆಯೇಷಾ ಬಾನು

Updated on: Aug 18, 2021 | 6:38 AM

Horoscope ಆಗಸ್ಟ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಬುಧವಾರ, ಆಗಸ್ಟ್ 18, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.19 ರಿಂದ ಇಂದು ಮಧ್ಯಾಹ್ನ 1.54 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.40

ತಾ.18-08-2021 ರ ಬುಧವಾರದ, ರಾಶಿಭವಿಷ್ಯ.

ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ವೃಷಭ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 8

ಕಟಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನೆಡೆ ಕಂಡುಬರುವುದು. ಶುಭ ಸಂಖ್ಯೆ: 2

ಸಿಂಹ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 7

ಕನ್ಯಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ತುಲಾ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 6

ಧನು: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 4

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 2

ಕುಂಭ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 9

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937