Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ

| Updated By: ಆಯೇಷಾ ಬಾನು

Updated on: Aug 19, 2021 | 6:47 AM

Horoscope ಆಗಸ್ಟ್ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಗುರುವಾರ, ಆಗಸ್ಟ್ 19, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.53 ರಿಂದ ಇಂದು ಸಂಜೆ 3.27 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.59. ಸೂರ್ಯಾಸ್ತ: ಸಂಜೆ 6.39

ತಾ.19-08-2021 ರ ಗುರುವಾರದ, ರಾಶಿಭವಿಷ್ಯ.

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 4

ವೃಷಭ: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 9

ಮಿಥುನ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 3

ಕಟಕ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 8

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 2

ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 7

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 2

ವೃಶ್ಚಿಕ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1

ಮಕರ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 5

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937