Horoscope Today- ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಮಂಗಲ ಕಾರ್ಯ ಜರುಗುವವು

| Updated By: ಆಯೇಷಾ ಬಾನು

Updated on: Aug 02, 2021 | 6:31 AM

Horoscope ಆಗಸ್ಟ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಮಂಗಲ ಕಾರ್ಯ ಜರುಗುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ನವಮಿ ತಿಥಿ, ಸೋಮವಾರ, ಆಗಸ್ಟ್ 02, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.31 ರಿಂದ ಇಂದು ಬೆಳಿಗ್ಗೆ 9.07 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.55. ಸೂರ್ಯಾಸ್ತ: ಸಂಜೆ 6.49

ತಾ.02-08-2021 ರ ಸೋಮವಾರದ,ರಾಶಿಭವಿಷ್ಯ.

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 6

ವೃಷಭ: ಯಾವುದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 9

ಕಟಕ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 4

ಸಿಂಹ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2

ಕನ್ಯಾ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 7

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 5

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮಕರ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 1

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 5

ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937