Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುವುದು

Horoscope ಆಗಸ್ಟ್ 20, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುವುದು
ದಿನ ಭವಿಷ್ಯ
Follow us
TV9 Web
| Updated By: ganapathi bhat

Updated on: Aug 20, 2021 | 6:37 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಶುಕ್ರವಾರ, ಆಗಸ್ಟ್ 20, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.44 ರಿಂದ ಇಂದು ಬೆಳಿಗ್ಗೆ 12.18ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.39

ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳೊಂದಿಗೆ ತಾ.20-08-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 1

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 9

ಮಿಥುನ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 2

ಕಟಕ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8

ಸಿಂಹ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 3

ಕನ್ಯಾ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 7

ತುಲಾ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 4

ವೃಶ್ಚಿಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 6

ಧನು: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 4

ಮಕರ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 9

ಕುಂಭ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವುದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 3

ಮೀನ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್