Horoscope Today – ದಿನ ಭವಿಷ್ಯ; ಈ ರಾಶಿಯ ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು

Horoscope ಆಗಸ್ಟ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯ ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು
ದಿನ ಭವಿಷ್ಯ
Follow us
TV9 Web
| Updated By: Skanda

Updated on: Aug 21, 2021 | 6:29 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಶನಿವಾರ, ಆಗಸ್ಟ್ 21, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.09 ರಿಂದ ಇಂದು ಬೆಳಿಗ್ಗೆ 10.43ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.38

ತಾ.21-08-2021 ರ ಶನಿವಾರದ ರಾಶಿಭವಿಷ್ಯ ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರ ಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಸಿಂಹ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 6

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8

ಮಕರ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 3

ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 4

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್