Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?

| Updated By: ganapathi bhat

Updated on: Aug 22, 2021 | 6:16 AM

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಭಾನುವಾರ, ಆಗಸ್ಟ್ 22, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಭಾನುವಾರ, ಆಗಸ್ಟ್ 22, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:2ರಿಂದ ಇಂದು ರಾತ್ರಿ 6:36 ತನಕ. . ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.38

ತಾ.22-08-2021 ರ ಭಾನುವಾರದ ರಾಶಿಭವಿಷ್ಯ.
*****

ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವiಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 9

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 1

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 8

ಕರ್ಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 2

ಸಿಂಹ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 7

ಕನ್ಯಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 3

ತುಲಾ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 6

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 4

ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು. ಶುಭ ಸಂಖ್ಯೆ: 9

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ.ಶುಭ ಸಂಖ್ಯೆ: 2

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937