Horoscope Today – ದಿನ ಭವಿಷ್ಯ; ಈ ರಾಶಿಯವರು ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ
Horoscope ಆಗಸ್ಟ್ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಸೋಮವಾರ, ಆಗಸ್ಟ್ 23, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.34 ರಿಂದ ಇಂದು ಬೆಳಿಗ್ಗೆ 9.08ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.37
ತಾ.23-08-2021 ರ ಸೋಮವಾರದ ರಾಶಿಭವಿಷ್ಯ
ಮೇಷ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6
ವೃಷಭ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 1
ಮಿಥುನ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 9
ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3
ಸಿಂಹ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಕನ್ಯಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 8
ತುಲಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 5
ವೃಶ್ಚಿಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2
ಧನು: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 7
ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 9
ಕುಂಭ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 3
ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 4