Horoscope Today – ದಿನ ಭವಿಷ್ಯ; ಶುಭ ಬುಧವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಬುಧವಾರ, ಆಗಸ್ಟ್ 25, 2021 ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಬುಧವಾರ, ಆಗಸ್ಟ್ 25, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 12:17 ಇಂದ ಇಂದು ಮಧ್ಯಾಹ್ನ 1:51 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.00. ಸೂರ್ಯಾಸ್ತ: ಸಂಜೆ 6.35
ತಾ.25-08-2021 ರ ಬುಧವಾರದ ರಾಶಿಭವಿಷ್ಯ. ****
ಮೇಷ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 6
ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಶುಭ ಸಂಖ್ಯೆ: 9
ಮಿಥುನ: ಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು. ಶುಭ ಸಂಖ್ಯೆ: 1
ಕರ್ಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. ಶುಭ ಸಂಖ್ಯೆ: 5
ಸಿಂಹ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು. ಶುಭ ಸಂಖ್ಯೆ: 9
ಕನ್ಯಾ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 2
ತುಲಾ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 4
ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 7
ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 8
ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1
ಮೀನ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಸಹನೆಯಿಂದ ವ್ಯವಹರಿಸಿರಿ.ಗುರುಬಲ ವೃದ್ಧಿಸುವದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವದು. ಹಿರಿಯರ ಮಾತಿನಂತೆ ನಡಯುವದು ಉತ್ತಮ. ಶುಭ ಸಂಖ್ಯೆ: 9
Published On - 6:54 am, Wed, 25 August 21