ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಚೌತಿ ತಿಥಿ, ಗುರುವಾರ, ಆಗಸ್ಟ್ 26, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.51 ರಿಂದ ಇಂದು ಸಂಜೆ 3.25ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.34
ತಾ.26-08-2021 ರ ಗುರುವಾರದ ರಾಶಿಭವಿಷ್ಯ.
ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 7
ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1
ಮಿಥುನ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 8
ಕಟಕ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 2
ಸಿಂಹ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 9
ಕನ್ಯಾ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 3
ತುಲಾ: ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವುದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು. ಶುಭ ಸಂಖ್ಯೆ: 6
ವೃಶ್ಚಿಕ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4
ಧನು: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 9
ಮಕರ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟ್ನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 7
ಕುಂಭ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 1
ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 5
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937