AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು

Horoscope ಆಗಸ್ಟ್ 27, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು
ದಿನ ಭವಿಷ್ಯ
TV9 Web
| Edited By: |

Updated on:Aug 27, 2021 | 6:47 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಶುಕ್ರವಾರ, ಆಗಸ್ಟ್ 27, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.43 ರಿಂದ ಇಂದು ಬೆಳಿಗ್ಗೆ 12.17ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.34

ತಾ.27-08-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 9

ವೃಷಭ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 1

ಮಿಥುನ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 8

ಕಟಕ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 2

ಸಿಂಹ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 7

ಕನ್ಯಾ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 3

ತುಲಾ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 6

ವೃಶ್ಚಿಕ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 4

ಧನು: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 5

ಮಕರ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಕುಂಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 2

ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:45 am, Fri, 27 August 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ