Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ
Horoscope ಆಗಸ್ಟ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಶನಿವಾರ, ಆಗಸ್ಟ್ 28, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.08 ರಿಂದ ಇಂದು ಬೆಳಿಗ್ಗೆ 10.42ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.33
ತಾ.28-08-2021 ರ ಶನಿವಾರದ ರಾಶಿಭವಿಷ್ಯ.
ಮೇಷ: ಹೊಟ್ಟೆಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 6
ವೃಷಭ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1
ಮಿಥುನ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 5
ಕಟಕ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 2
ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 4
ಕನ್ಯಾ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 7
ತುಲಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 3
ವೃಶ್ಚಿಕ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9
ಧನು: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 1
ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 8
ಕುಂಭ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 7