Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ

| Updated By: ಆಯೇಷಾ ಬಾನು

Updated on: Aug 03, 2021 | 6:29 AM

Horoscope ಆಗಸ್ಟ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಮಂಗಳವಾರ, ಆಗಸ್ಟ್ 03, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.34 ರಿಂದ ಇಂದು ಸಂಜೆ 5.10 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.55. ಸೂರ್ಯಾಸ್ತ: ಸಂಜೆ 6.48

ತಾ.03-08-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನ ಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 1

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 8

ಕಟಕ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 2

ಸಿಂಹ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 7

ಕನ್ಯಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 3

ತುಲಾ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 6

ವೃಶ್ಚಿಕ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 4

ಧನು: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 5

ಮಕರ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಕುಂಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ಶುಭ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937