AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಸೋಮವಾರದ ರಾಶಿಫಲ, ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು

Horoscope ಆಗಸ್ಟ್ 30, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಸೋಮವಾರದ ರಾಶಿಫಲ, ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು
ದಿನ ಭವಿಷ್ಯ
TV9 Web
| Edited By: |

Updated on:Aug 30, 2021 | 6:33 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಸೋಮವಾರ, ಆಗಸ್ಟ್ 30, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.34 ರಿಂದ ಇಂದು ಬೆಳಿಗ್ಗೆ 9.07ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.31

ತಾ.30-08-2021 ರ ಸೋಮವಾರದ ರಾಶಿಭವಿಷ್ಯ. ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಯಾವುದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಸೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 9

ಮಿಥುನ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 4

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 8

ಸಿಂಹ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 3

ಕನ್ಯಾ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಧನು: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:31 am, Mon, 30 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್