AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಶ್ರಾವಣ ಮಾಸದ ಮಂಗಳವಾರದ ರಾಶಿಫಲ

Horoscope ಆಗಸ್ಟ್ 31, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಶ್ರಾವಣ ಮಾಸದ ಮಂಗಳವಾರದ ರಾಶಿಫಲ
ದಿನ ಭವಿಷ್ಯ
TV9 Web
| Edited By: |

Updated on: Aug 31, 2021 | 7:04 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣಪಕ್ಷ, ನವಮಿ ತಿಥಿ, ಮಂಗಳವಾರ, ಆಗಸ್ಟ್ 31, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.23 ರಿಂದ ಇಂದು ಸಂಜೆ 4.56ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.31

ತಾ.31-08-2021 ರ ಮಂಗಳವಾರದ ರಾಶಿಭವಿಷ್ಯ:-

ಮೇಷ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 6

ವೃಷಭ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 9

ಮಿಥುನ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಕಟಕ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 7

ಸಿಂಹ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4

ಕನ್ಯಾ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ತುಲಾ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಶ್ಚಿಕ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 3

ಧನು: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಕರ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. ಶುಭ ಸಂಖ್ಯೆ: 4

ಕುಂಭ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಮೀನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 2

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ