AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ

Horoscope ಆಗಸ್ಟ್ 04, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ
ದಿನ ಭವಿಷ್ಯ
TV9 Web
| Updated By: ಆಯೇಷಾ ಬಾನು|

Updated on: Aug 04, 2021 | 6:28 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಬುಧವಾರ, ಆಗಸ್ಟ್ 04, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.22 ರಿಂದ ಇಂದು ಮಧ್ಯಾಹ್ನ 1.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.48

ತಾ.04-08-2021 ರ ಬುಧವಾರ ರಾಶಿಭವಿಷ್ಯ

ಮೇಷ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 5

ವೃಷಭ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 7

ಮಿಥುನ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 1

ಕಟಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 8

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 4

ಕನ್ಯಾ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 5

ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 2

ವೃಶ್ಚಿಕ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 6

ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 3

ಮಕರ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 6

ಕುಂಭ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 8

ಮೀನ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್