Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ

| Updated By: ಆಯೇಷಾ ಬಾನು

Updated on: Aug 05, 2021 | 6:34 AM

Horoscope ಆಗಸ್ಟ್ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಗುರುವಾರ, ಆಗಸ್ಟ್ 05, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.57 ರಿಂದ ಇಂದು ಸಂಜೆ 3.33 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.47

ತಾ.05-08-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 5

ವೃಷಭ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 9

ಮಿಥುನ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 1

ಕಟಕ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 4

ಸಿಂಹ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 7

ಕನ್ಯಾ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 6

ತುಲಾ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 8

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 2

ಮಕರ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 7

ಕುಂಭ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 3

ಮೀನ: ಹಣಕಾಸಿನ ವ್ಯವಹಾರದಲ್ಲಿ ಧೈರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937