Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು
ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಶುಕ್ರವಾರ, ಆಗಸ್ಟ್ 06, 2021
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಶುಕ್ರವಾರ, ಆಗಸ್ಟ್ 06, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10:45ರಿಂದ ಮಧ್ಯಾಹ್ನ 12: 21 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.47
ತಾ.6-08-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9
ಮಿಥುನ:ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 5
ಕರ್ಕ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ: ಶುಭ ಸಂಖ್ಯೆ: 7
ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 3
ಕನ್ಯಾ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1
ತುಲಾ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 9
ವೃಶ್ಚಿಕ: ಸಹನೆಗೆ ತಕ್ಕ ಫಲ ದೊರೆಯುವದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವದು. ಸಂತಾನಫಲದ ಅಪೇಕ್ಷೆ ಈಡೇರುವದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 5
ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 2
ಮಕರ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 9
ಕುಂಭ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 8
ಮೀನ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 4