Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು

Horoscope ಆಗಸ್ಟ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು
ದಿನ ಭವಿಷ್ಯ
Follow us
TV9 Web
| Updated By: Skanda

Updated on: Aug 07, 2021 | 6:36 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಶನಿವಾರ, ಆಗಸ್ಟ್ 07, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9-8 ರಿಂದ ಇಂದು ಬೆಳಿಗ್ಗೆ 10.44 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.56. ಸೂರ್ಯಾಸ್ತ: ಸಂಜೆ 6.46

ತಾ.07-08-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ವ್ಯಾಪಾರದಲ್ಲಿ ಅದೃಷ್ಟ, ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 5

ವೃಷಭ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 9

ಮಿಥುನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 4

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8

ಸಿಂಹ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 3

ಕನ್ಯಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಥಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 2

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 6

ಧನು: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಕುಂಭ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 9

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್