ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಮವಾಸ್ಯೆ ತಿಥಿ, ಭಾನುವಾರ, ಆಗಸ್ಟ್ 08, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:9ರಿಂದ ಇಂದು ರಾತ್ರಿ 6:45 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.46
ತಾ.08-08-2021 ರ ಭಾನುವಾರದ ರಾಶಿಭವಿಷ್ಯ.
ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 9
ವೃಷಭ: ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು. ಶುಭ ಸಂಖ್ಯೆ: 1
ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 8
ಕರ್ಕ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ: 2
ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭ ಸಂಖ್ಯೆ: 7
ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3
ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 6
ವೃಶ್ಚಿಕ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4
ಧನು: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 7
ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 1
ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 2
ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 5
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937