ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಸೋಮವಾರ, ಆಗಸ್ಟ್ 09, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.33 ರಿಂದ ಇಂದು ಬೆಳಿಗ್ಗೆ 9.09 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.57. ಸೂರ್ಯಾಸ್ತ: ಸಂಜೆ 6.45
ತಾ.09-08-2021 ರ ಸೋಮವಾರದ ರಾಶಿಭವಿಷ್ಯ.
ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 6
ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 1
ಮಿಥುನ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 5
ಕಟಕ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 2
ಸಿಂಹ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4
ಕನ್ಯಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 3
ತುಲಾ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 9
ವೃಶ್ಚಿಕ: ಸಜ್ಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 8
ಧನು: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 7
ಮಕರ: ಅಲ್ಪತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 5
ಕುಂಭ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 2
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 4