Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ ಉಂಟಾಗಲಿದೆ

Horoscope ಡಿಸೆಂಬರ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ ಉಂಟಾಗಲಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Dec 01, 2021 | 6:50 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಬುಧವಾರ, ಡಿಸೆಂಬರ್ 01, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.03 ರಿಂದ ಇಂದು ಮಧ್ಯಾಹ್ನ 1.26 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.29. ಸೂರ್ಯಾಸ್ತ: ಸಂಜೆ 5.39

ತಾ.1-12-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 3

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 6

ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಕಟಕ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4

ಸಿಂಹ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವುದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ. ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು. ಶುಭ ಸಂಖ್ಯೆ: 2

ಕನ್ಯಾ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 7

ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 8

ವೃಶ್ಚಿಕ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 7

ಧನು: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 1

ಮಕರ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 8

ಕುಂಭ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 6

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ