AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ

Horoscope ಡಿಸೆಂಬರ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Edited By: |

Updated on: Dec 03, 2021 | 6:35 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಡಿಸೆಂಬರ್ 03, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.41 ರಿಂದ ಇಂದು ಬೆಳಿಗ್ಗೆ 12.04 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.31. ಸೂರ್ಯಾಸ್ತ: ಸಂಜೆ 5.40

ತಾ.03-12-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಕಟಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ಸಿಂಹ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 2

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 4

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 8

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 3

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್