AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಅಭಿವೃದ್ಧಿ ಕಂಡುಬರುತ್ತದೆ

Horoscope ಡಿಸೆಂಬರ್ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಅಭಿವೃದ್ಧಿ ಕಂಡುಬರುತ್ತದೆ
ದಿನ ಭವಿಷ್ಯ
TV9 Web
| Edited By: |

Updated on: Dec 06, 2021 | 8:52 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಚಳಿಗಾಲ, ಸೋಮವಾರ, ಡಿಸೆಂಬರ್ 06, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.32 . ಸೂರ್ಯಾಸ್ತ: ಸಂಜೆ 5.40.

ತಾ.06-12-2021 ರ ಸೋಮವಾರ ರಾಶಿಭವಿಷ್ಯ. ಮೇಷ ಆಕಸ್ಮಿಕ ಧನಲಾಭ. ಕೋರ್ಟ್​ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಸಂಖ್ಯೆ: 1

ವೃಷಭ ತಾಳ್ಮೆಯಿರಲಿ, ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಸಂಖ್ಯೆ: 5

ಮಿಥುನ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುತ್ತದೆ. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಕಾರಣಾಂತರ ಅಧಿಕ ಖರ್ಚು ಬರಬಹುದು. ಸಂಖ್ಯೆ: 9

ಕರ್ಕ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಸಂಖ್ಯೆ: 5

ಸಿಂಹ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಸಂಖ್ಯೆ: 8

ಕನ್ಯಾ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಸಂಖ್ಯೆ: 3

ತುಲಾ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುವು. ಸಂಖ್ಯೆ:6

ವೃಶ್ಚಿಕ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ಸಂಖ್ಯೆ: 7

ಧನು ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಸಂಖ್ಯೆ: 4

ಮಕರ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಸಂಖ್ಯೆ: 2

ಕುಂಭ ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು. ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಸಂಖ್ಯೆ: 1

ಮೀನ ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದಿತು. ಸಂಖ್ಯೆ: 4

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ