Horoscope Today- ದಿನ ಭವಿಷ್ಯ; ಕಟಕ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಸಿಗಲಿದೆ

Horoscope ಡಿಸೆಂಬರ್ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಕಟಕ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಸಿಗಲಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Dec 10, 2021 | 6:40 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಶುಕ್ರವಾರ, ಡಿಸೆಂಬರ್ 10, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.45 ರಿಂದ ಇಂದು ಬೆಳಿಗ್ಗೆ 12.08 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.35. ಸೂರ್ಯಾಸ್ತ: ಸಂಜೆ 5.42

ತಾ.10-12-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸುಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 7

ಕಟಕ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 2

ಸಿಂಹ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 1

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 5

ತುಲಾ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವುದು. ಶುಭ ಸಂಖ್ಯೆ: 4

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 2

ಧನು: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 9

ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 3

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ ಶುಭ ಸಂಖ್ಯೆ: 7

ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ