Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು
Horoscope ಡಿಸೆಂಬರ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಶುಕ್ರವಾರ, ಡಿಸೆಂಬರ್ 24, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.51 ರಿಂದ ಇಂದು ಬೆಳಿಗ್ಗೆ 12.14 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.42. ಸೂರ್ಯಾಸ್ತ: ಸಂಜೆ 5.48
ತಾ.24-12-2021 ರ ಶುಕ್ರವಾರದ ರಾಶಿಭವಿಷ್ಯ. ಮೇಷ: ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ. ಶುಭ ಸಂಖ್ಯೆ: 7
ವೃಷಭ: ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ಶುಭ ಸಂಖ್ಯೆ: 1
ಮಿಥುನ: ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ. ಶುಭ ಸಂಖ್ಯೆ: 3
ಕಟಕ: ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ. ಶುಭ ಸಂಖ್ಯೆ: 9
ಸಿಂಹ: ಅನ್ಯಾಯವನ್ನು ಕಂಡು ಸಹಿಸಲಾರದ ನೀವು ನಿಮ್ಮ ಎದುರಾಳಿಯನ್ನು ಎದುರಿಸಲು ಹೆಚ್ಚಿನ ಆತ್ಮಸ್ಥೈರ್ಯದಿಂದ ಹೋರಾಟ ಮಾಡುವಿರಿ ಮತ್ತು ಅದರಲ್ಲಿ ಜಯವನ್ನು ಸಂಪಾದಿಸುವಿರಿ. ಶುಭ ಸಂಖ್ಯೆ: 6
ಕನ್ಯಾ: ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು. ಶುಭ ಸಂಖ್ಯೆ: 3
ತುಲಾ: ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ. ಶುಭ ಸಂಖ್ಯೆ: 2
ವೃಶ್ಚಿಕ: ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು. ಶುಭ ಸಂಖ್ಯೆ: 8
ಧನು: ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು. ಶುಭ ಸಂಖ್ಯೆ: 4
ಮಕರ: ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ. ಶುಭ ಸಂಖ್ಯೆ: 5
ಕುಂಭ: ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಶುಭ ಸಂಖ್ಯೆ: 7
ಮೀನ: ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು. ಶುಭ ಸಂಖ್ಯೆ: 6
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937