Horoscope: ದಿನ ಭವಿಷ್ಯ | ಕರ್ಕ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಳಂಬ

ನಿತ್ಯ ಭವಿಷ್ಯ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಫೆಬ್ರವರಿ 14, 2021. ಪೂರ್ವಾಭಾದ್ರೆ ನಕ್ಷತ್ರದ ರಾಶಿ ಭವಿಷ್ಯ.

  • TV9 Web Team
  • Published On - 6:31 AM, 14 Feb 2021
Horoscope: ದಿನ ಭವಿಷ್ಯ | ಕರ್ಕ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಳಂಬ
ದಿನ ಭವಿಷ್ಯ

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ಫೆಬ್ರವರಿ 14, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:50 ರಿಂದ ಸಂಜೆ 6:16ರವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.43. ಸೂರ್ಯಾಸ್ತ: ಸಂಜೆ 6.17.

ದಿನಾಂಕ 14-02-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ವೃಷಭ: ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವದು. ಶುಭ ಸಂಖ್ಯೆ: 2

ಮಿಥುನ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 1

ಕರ್ಕ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 9

ಸಿಂಹ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ:5

ಕನ್ಯಾ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ:8

ತುಲಾ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ:3

ವೃಶ್ಚಿಕ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು. ಶುಭ ಸಂಖ್ಯೆ:2

ಧನು: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ:7

ಮಕರ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ:5

ಕುಂಭ: ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ:1

ಮೀನ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ:4

basavaraj guruji

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)