Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವಿನಾಕಾರಣ ನಿಂದನೆಯ ಸಂಭವವಿದೆ
Horoscope ಜುಲೈ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಗುರುವಾರ, ಜುಲೈ 01, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.58 ರಿಂದ ಇಂದು ಸಂಜೆ 3.36 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.45. ಸೂರ್ಯಾಸ್ತ: ಸಂಜೆ 6.54
ತಾ.01-07-2021 ರ ಗುರುವಾರದ ರಾಶಿಭವಿಷ್ಯ
ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚು ಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6
ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 9
ಮಿಥುನ: ಯಾವುದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 3
ಕಟಕ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 8
ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 1
ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 4
ತುಲಾ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 7
ವೃಶ್ಚಿಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 5
ಧನು: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 2
ಮಕರ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 8
ಕುಂಭ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 6
ಮೀನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 9