Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು
Horoscope ಜುಲೈ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ಜುಲೈ 02, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.40 ರಿಂದ ಇಂದು ಬೆಳಿಗ್ಗೆ 12.18 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.45. ಸೂರ್ಯಾಸ್ತ: ಸಂಜೆ 6.54
ತಾ.02-07-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 3
ವೃಷಭ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 9
ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 1
ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 8
ಸಿಂಹ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6
ತುಲಾ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆ ಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 5
ವೃಶ್ಚಿಕ: ಭಾಗ್ಯ ವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2
ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 8
ಮಕರ: ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 4
ಕುಂಭ: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 7
ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ, ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 5