AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಇಂದಿನ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಒಳಿತು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ನವಮಿ ತಿಥಿ, ಶನಿವಾರ, ಜುಲೈ 03, 2021.

Horoscope Today - ದಿನ ಭವಿಷ್ಯ; ಇಂದಿನ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಒಳಿತು?
ಭವಿಷ್ಯ
TV9 Web
| Updated By: Skanda|

Updated on: Jul 03, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ನವಮಿ ತಿಥಿ, ಶನಿವಾರ, ಜುಲೈ 03, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.40 ರಿಂದ ಇಂದು ಬೆಳಿಗ್ಗೆ 12.18 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.45. ಸೂರ್ಯಾಸ್ತ: ಸಂಜೆ 6.54

ತಾ.03-07-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2

ಮಿಥುನ: ವ್ಯಾಪಾರದಲ್ಲಿ ಅದೃಷ್ಟ ಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 7

ಸಿಂಹ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆ ನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 4

ಕನ್ಯಾ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 8

ತುಲಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ:  1

ವೃಶ್ಚಿಕ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 6

ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ:  6

ಮಕರ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 7

ಕುಂಭ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ, ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ