Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಒಳಿತು ತರಲಿದೆ ಈ ಭಾನುವಾರ
ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021 ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:15ಇಂದ ಇಂದು ರಾತ್ರಿ 6:53 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54
ತಾ.04-07-2021 ರ ಭಾನುವಾರದ ರಾಶಿಭವಿಷ್ಯ.
ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 5
ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9
ಮಿಥುನ:ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 2
ಕಟಕ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. 6
ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 7
ಕನ್ಯಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 1
ತುಲಾ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3
ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 8
ಧನು: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ:4
ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. 6
ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 2
ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937