Horoscope Today – ದಿನ ಭವಿಷ್ಯ; ಈ ರಾಶಿಯವರು ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು

| Updated By: Skanda

Updated on: Jul 05, 2021 | 6:30 AM

Horoscope ಜುಲೈ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರು ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಏಕಾದಶಿ ತಿಥಿ, ಸೋಮವಾರ, ಜುಲೈ 05, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.24 ರಿಂದ ಇಂದು ಬೆಳಿಗ್ಗೆ 9.02 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54

ತಾ.05-07-2021 ರ ಸೋಮವಾರದ ರಾಶಿಭವಿಷ್ಯ,

ಮೇಷ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 3

ವೃಷಭ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 9

ಮಿಥುನ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 1

ಕಟಕ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಸಿಂಹ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2

ಕನ್ಯಾ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 7

ತುಲಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 5

ವೃಶ್ಚಿಕ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 4

ಧನು: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 2

ಮಕರ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 8

ಕುಂಭ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 5

ಮೀನ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937