Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು
Horoscope ಜುಲೈ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಮಂಗಳವಾರ, ಜುಲೈ 06, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.36 ರಿಂದ ಇಂದು ಸಂಜೆ 5. 14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54
ತಾ.06-07-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1
ವೃಷಭ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 9
ಮಿಥುನ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 6
ಕಟಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 2
ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8
ಕನ್ಯಾ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 3
ತುಲಾ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 6
ವೃಶ್ಚಿಕ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 4
ಧನು: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7
ಮಕರ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 5
ಕುಂಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 3
ಮೀನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937
Published On - 6:45 am, Tue, 6 July 21