Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾದ್ಯತೆ ಇದೆ

Horoscope ಜುಲೈ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನವಶ್ಯಕ ಅಲೆದಾಟದ ಸಾದ್ಯತೆ ಇದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jul 07, 2021 | 6:22 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಬುಧವಾರ, ಜುಲೈ 07, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.20 ರಿಂದ ಇಂದು ಮಧ್ಯಾಹ್ನ 1.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.47. ಸೂರ್ಯಾಸ್ತ: ಸಂಜೆ 6.54

ತಾ.07-07-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 5

ವೃಷಭ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 1

ಮಿಥುನ: ಹೊಟ್ಟೆಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಕಟಕ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 4

ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 8

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 1

ತುಲಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 3

ಧನು: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 6

ಮಕರ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 2

ಕುಂಭ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 5

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು