AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ

Horoscope ಜುಲೈ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Updated By: ಆಯೇಷಾ ಬಾನು|

Updated on: Jul 09, 2021 | 6:27 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಶುಕ್ರವಾರ, ಜುಲೈ 09, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.42 ರಿಂದ ಇಂದು ಬೆಳಿಗ್ಗೆ 12.20 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.47. ಸೂರ್ಯಾಸ್ತ: ಸಂಜೆ 6.54

ತಾ.09-07-2021 ರ ಶುಕ್ರವಾರದ ರಾಶಿಭವಿಷ್ಯ ಆಷಾಢ ಮಾಸ ಪ್ರಾರಂಭ, ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7

ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 2

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 5

ಕಟಕ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 9

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯಗಳು ಪರಿಹಾರವಾಗುವವು. ಶುಭ ಸಂಖ್ಯೆ: 4

ಕನ್ಯಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ವೃಶ್ಚಿಕ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 8

ಧನು: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 1

ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 4

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 6

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ