Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ವಿನಾಕಾರಣ ನಿಂದನೆಯ ಸಂಭವವಿದೆ

Horoscope ಜುಲೈ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ವಿನಾಕಾರಣ ನಿಂದನೆಯ ಸಂಭವವಿದೆ
ದಿನ ಭವಿಷ್ಯ
Follow us
TV9 Web
| Updated By: Skanda

Updated on: Jul 10, 2021 | 6:30 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಶನಿವಾರ, ಜುಲೈ 10, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.04 ರಿಂದ ಇಂದು ಬೆಳಿಗ್ಗೆ 10.42 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.48. ಸೂರ್ಯಾಸ್ತ: ಸಂಜೆ 6.54

ತಾ.10-07-2021 ರ ಶನಿವಾರದ ರಾಶಿಭವಿಷ್ಯ

ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 2

ಕಟಕ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಸಿಂಹ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 5

ಕನ್ಯಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 7

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 3

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 4

ಮಕರ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 4

ಕುಂಭ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 7

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ